ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸರ್ಕಾರೀ ನೌಕಕರಿಗೆ ಕೊನೆಯ ಗಳಿಗೆಯಲ್ಲಿ ಮುಂಬಡ್ತಿ ತಪ್ಪಿ ಹೋದೀತು. ಅಧ್ಯಯನ ಶೀಲರಿಗೆ ಉನ್ನತ ಅವಕಾಶಗಳು ಸಿಗಲಿವೆ. ಮನಸ್ಸಿನಲ್ಲಿರುವುದನ್ನು ಆಪ್ತರೊಂದಿಗೆ ಹೇಳಿಕೊಳ್ಳಲು ಹಿಂಜರಿಯಲಿದ್ದೀರಿ.ವೃಷಭ: ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆಯಿದ್ದು, ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿಯಿರಲಿದೆ. ಹಣಕಾಸಿನ ವಿಚಾರದಲ್ಲಿ ಆತ್ಮೀಯರಿಂದ ಸಹಾಯ ಸಿಗಲಿದೆ. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ.ಮಿಥುನ: ವಿಶೇಷ ವ್ಯಕ್ತಿಗಳು ಇಂದು ನಿಮ್ಮ ಜೀವನಕ್ಕೆ ಹೊಸ ತಿರುವು ನೀಡಲಿದ್ದಾರೆ. ದಾಂಪತ್ಯದಲ್ಲಿ ಸುಖಕ್ಕೆ ಕೊರತೆಯಾಗದು.