ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಾಂಸಾರಿಕವಾಗಿ ನೀವು ಕೆಲವೊಂದು ಮಹತ್ವದ ತೀರ್ಮಾನ ಕೈಗೊಳ್ಳಬೇಕಾದ ದಿನವಿದು. ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಿಕೊಳ್ಳಬೇಕಾಗುತ್ತದೆ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ.ವೃಷಭ: ಹಣಕಾಸಿನ ವಿಚಾರದಲ್ಲಿ ಹಿಡಿತವಿಲ್ಲದೇ ಹೋದರೆ ಭವಿಷ್ಯಕ್ಕೆ ತೊಂದರೆಯಾದೀತು. ಸಂಗಾತಿಯ ಸಮಯೋಚಿತ ಸಲಹೆ ಉಪಯೋಗಕ್ಕೆ ಬರಲಿದೆ. ತಾಂತ್ರಿಕ ವೃತ್ತಿಯವರಿಗೆ ಮುನ್ನಡೆ ಕಂಡುಬರಲಿದೆ. ತಾಳ್ಮೆಯಿರಲಿ.ಮಿಥುನ: ಆತುರದ ಬುದ್ಧಿಗೆ ಕೈ ಕೊಟ್ಟು ಎಡವಟ್ಟು ಮಾಡಿಕೊಳ್ಳಬೇಡಿ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ.