ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ, ವ್ಯವಹಾರದಲ್ಲಿ ಅಡಚಣೆಗಳು ನಿವಾರಣೆಯಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಸಾಂಸಾರಿಕವಾಗಿ ನೆಮ್ಮದಿ ಕಂಡುಕೊಳ್ಳುವುದು ನಿಮ್ಮ ಕೈಯಲ್ಲೇ ಇದೆ. ತಾಳ್ಮೆ, ಸಂಯಮವಿರಲಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆಗೆ ಪ್ರಯತ್ನಿಸಲಿದ್ದೀರಿ. ಸರಕಾರೀ ನೌಕರರಿಗೆ ಬಿಡುವಿನ ಸಂತೋಷವಿರಲಿದೆ. ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ. ಕಿರು ಓಡಾಟ ನಡೆಸಬೇಕಾಗುತ್ತದೆ.ಮಿಥುನ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳನ್ನು ಹೊರಬೇಕಾಗುತ್ತದೆ.