ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ, ವ್ಯವಹಾರದಲ್ಲಿ ಪರಸ್ಪರ ಸಹಕಾರವಿದ್ದರೆ ಮಾತ್ರ ಯಶಸ್ಸು. ಮಕ್ಕಳ ದೇಹಾರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ. ಹಣಕಾಸಿನ ವಿಚಾರದಲ್ಲಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.ವೃಷಭ: ಅನಿರೀಕ್ಷಿತವಾಗಿ ಭೇಟಿಯಾಗುವ ವ್ಯಕ್ತಿಗಳಿಂದ ನಿಮ್ಮ ಜೀವನಕ್ಕೆ ತಿರುವ ಸಿಗಲಿದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಕೆಲಸ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ.ಮಿಥುನ: ಕೆಲಸ ಕಾರ್ಯಗಳಲ್ಲಿ ಧಾವಂತ ಕಂಡುಬರಲಿದೆ. ಕ್ರಿಯಾತ್ಮಕವಾಗಿ ಯೋಚನೆ ಮಾಡಿದರೆ ಸಮಸ್ಯೆಗಳಿಂದ ಪಾರಾಗಬಹುದು. ಇಷ್ಟಮಿತ್ರರೊಂದಿಗೆ ಇಷ್ಟ