ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸರಕಾರೀ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಒಂದು ರೀತಿಯ ಆಲಸ್ಯ ಮನೋಭಾವ ಕಂಡುಬಂದೀತು. ಕೆಲವೊಂದು ವಿಚಾರಗಳನ್ನು ಸಂಗಾತಿಯೊಂದಿಗೆ ಹಂಚಿಕೊಳ್ಳಬೇಕಾದ ಅನಿವಾರ್ಯತೆಯಿದೆ.ವೃಷಭ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ನಿರುದ್ಯೋಗಿಗಳು ಸೂಕ್ತ ಉದ್ಯೋಗಕ್ಕಾಗಿ ಪ್ರಯತ್ನ ಮುಂದುವರಿಸಬೇಕಾಗುತ್ತದೆ. ತಾಳ್ಮೆಯಿರಲಿ.ಮಿಥುನ: ಕೌಟುಂಬಿಕ ವಿಚಾರವಾಗಿ ಕೆಲವೊಂದು ಭಿನ್ನಾಭಿಪ್ರಾಯಗಳು ಬಂದೀತು. ಸಲಹೆಗಳಿಗೆ ಕಿವಿಗೊಡುವ ತಾಳ್ಮೆ ನಿಮ್ಮದಾಗಿರಲಿ. ಆರ್ಥಿಕವಾಗಿ ಹಣಕಾಸಿನ