ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಾಂಸಾರಿಕವಾಗಿ ಅನೇಕ ವಿಚಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳಲು ಗೊಂದಲಗಳು ಕಾಡೀತು. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಮಕ್ಕಳ ದೇಹಾರೋಗ್ಯ ಚಿಂತೆಗೆ ಕಾರಣವಾಗಲಿದೆ.ವೃಷಭ: ಪಾಲುದಾರಿಕಾ ವ್ಯವಹಾರದಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕಾಗುತ್ತದೆ. ಸಾಂಸಾರಿಕವಾಗಿ ಸುಖ ಸಮೃದ್ಧಿ ಕಂಡುಬರಲಿದೆ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಉದ್ಯೋಗ, ವ್ಯವಹಾರಗಳಲ್ಲಿ ಹೆಚ್ಚಿನ ಜವಾಬ್ಧಾರಿ ನಿಮ್ಮದಾಗಲಿದೆ. ಗುರುಹಿರಿಯರಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಪ್ರೋತ್ಸಾಹ ಕಂಡುಬರಲಿದೆ.