ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಸಂಬಂಧವಾಗಿ ಮೇಲಧಿಕಾರಿಗಳಿಂದ ಕಿರಿ ಕಿರಿ ಕಂಡುಬರಲಿದೆ. ಸ್ವಯಂ ವೃತ್ತಿಯವರು ಹೊಸ ಸಾಹಸಕ್ಕೆ ಕೈ ಹಾಕಲಿದ್ದಾರೆ. ಧನಾಗಮನವಿದ್ದರೂ ಅಷ್ಟೇ ಖರ್ಚೂ ಇರಲಿದೆ. ಸ್ಪಷ್ಟ ನಿರ್ಧಾರದಿಂದ ನಿರೀಕ್ಷಿತ ಲಾಭ ಸಾಧ್ಯ.ವೃಷಭ: ಕಾರ್ಯಕ್ಷೇತ್ರದಲ್ಲಿ ಅಧಿಕ ಪರಿಶ್ರಮದಿಂದ ಸಫಲತೆ ಸಾಧ್ಯ. ಸಾರ್ವಜನಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣವಿರಲಿದೆ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಬಂಧು ಮಿತ್ರರೊಂದಿಗೆ ಕಾಲ ಕಳೆಯುವ ಅವಕಾಶ