ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ತಾಳ್ಮೆಯಿಂದ ನಡೆದುಕೊಳ್ಳಿ. ಯಾವುದೇ ವಿಚಾರವಾದರೂ ತಲ್ಲೀನತೆಯಿಂದ ತೊಡಗಿಸಿಕೊಳ್ಳಲಿದ್ದೀರಿ. ಹಿರಿಯರಿಗೆ ಸತ್ಕರ್ಮಗಳಲ್ಲಿ ಭಾಗಿಯಾದ ಸಂತೋಷ ಸಿಗುವುದು.ವೃಷಭ: ಬಯಸದೇ ಬಂದ ಭಾಗ್ಯ ನಿಮ್ಮ ಜೀವನದ ಸಂತೋಷ ಹೆಚ್ಚಿಸಲಿದೆ. ಅವಿವಾಹಿತರಿಗೆ ಯೋಗ್ಯ ಸಂಬಂಧ ಕೂಡಿಬರಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದೇವತಾ ಪ್ರಾರ್ಥನೆ ಮಾಡಬೇಕಾಗುತ್ತದೆ.ಮಿಥುನ: ಕುಟುಂಬ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಹಿರಿಯರ ಸಲಹೆಗಳನ್ನು ಪಾಲಿಸಬೇಕಾಗುತ್ತದೆ.