ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಗೃಹಿಣಿಯರಿಗೆ ಗೃಹಕೃತ್ಯಗಳಿಂದ ಬಿಡುವು. ಮನಸ್ಸಿಗೆ ಉಲ್ಲಾಸ ಕೊಡುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಬಹಳ ದಿನಗಳ ನಂತರ ಆತ್ಮೀಯರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಎಷ್ಟೇ ಪ್ರಯತ್ನಪಟ್ಟರೂ ಪರಿಶ್ರಮಕ್ಕೆ ತಕ್ಕ ಫಲ ಸಿಗುತ್ತಿಲ್ಲ ಎಂಬ ಬೇಸರ ಕಾಡಲಿದೆ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಅಭಿವೃದ್ಧಿಗೆ ಕೆಲವೊಂದು ಯೋಜನೆ