ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಪಾಲುದಾರಿಕಾ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ಲಾಭ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರುವುದು. ಬಹಳ ದಿನಗಳ ನಂತರ ಆಪ್ತರ ಭೇಟಿಯಾದ ಸಂತೋಷ ನಿಮ್ಮದಾಗಲಿದ.ೆವೃಷಭ: ಆರೋಗ್ಯದಲ್ಲಿ ಸಣ್ಣ ಪುಟ್ಟ ಕಿರಿ ಕಿರಿಯಿದ್ದರೂ ಮಾನಸಿಕವಾಗಿ ನೀವು ಮಾಡುವ ಕೆಲಸಗಳು ನಿಮಗೆ ತೃಪ್ತಿ ತಂದುಕೊಡಲಿದೆ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆ ನೀಡಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಸರಕಾರಿ ಕೆಲಸಗಳಲ್ಲಿರುವವರಿಗೆ ಉದ್ಯೋಗದಲ್ಲಿ ಕಾರ್ಯದೊತ್ತಡ ಕಂಡುಬರಲಿದೆ.