ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಗುರುಹಿರಿಯರನ್ನು ಭೇಟಿಯಾಗುವ ಯೋಗ. ದಂಪತಿಗಳಲ್ಲಿ ಪರಸ್ಪರ ಸಹಕಾರ ಕಂಡುಬರುವುದು. ವಿದ್ಯಾರ್ಥಿಗಳಿಗೆ ಪೂರಕ ವಾತಾವರಣವಿರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು.ವೃಷಭ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷಿತ ಅಭಿವೃದ್ಧಿಯಿದ್ದರೂ ಹಿತಶತ್ರುಗಳ ಕಾಟ ಕಂಡುಬರಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಇಷ್ಟು ದಿನ ಮುಚ್ಚಿಟ್ಟಿದ್ದ ವಿಚಾರಗಳು ಬಯಲಾಗಲಿವೆ.ಮಿಥುನ: ಆತುರದ ನಿರ್ಧಾರ ಅನಾಹುತಕ್ಕೆ ಕಾರಣವಾದೀತು. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ನೂತನ ಮಿತ್ರರನ್ನು ಸಂಪಾದಿಸಲಿದ್ದೀರಿ.