ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಷ್ಟವಾಗಿರುವುದನ್ನು ಮರಳಿ ಪಡೆಯಲು ಪ್ರಯತ್ನಿಸಲಿದ್ದೀರಿ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ತಾಳ್ಮೆಯಿರಲಿ.ವೃಷಭ: ವಿವಿಧ ಚಟುವಟಿಕೆಗಳಿಂದ ಕೂಡಿದ ದಿನವಿಂದು. ಬಹಳ ದಿನಗಳಿಂದ ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡುವಿರಿ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಸಕಾರಾತ್ಮಕ ಬದಲಾವಣೆ ಕಂಡುಬರಲಿದೆ. ದೂರದ ವ್ಯವಹಾರಗಳಿಂದ ಧನಾಗಮನವಾಗಲಿದೆ.