ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕಾರ್ಯಕ್ಷೇತ್ರದಲ್ಲಿ ಹೊಂದಾಣಿಕೆಯಿದ್ದರೆ ಮಾತ್ರ ಯಶಸ್ಸು ಸಿಗಲಿದೆ. ಹಣಕಾಸಿನ ವಿಚಾರದಲ್ಲಿ ಯೋಚನೆಯಾದೀತು. ಮಕ್ಕಳಿಗಾಗಿ ಖರ್ಚು ವೆಚ್ಚಗಳಾದೀತು. ಇಷ್ಟ ಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ತಾಳ್ಮೆಯಿರಲಿ.ವೃಷಭ: ಉದ್ಯೋಗ, ವ್ಯವಹಾರದಲ್ಲಿ ನಿಮ್ಮ ಯಶಸ್ಸು ತಡೆಯಲು ಯಾರಿಗೂ ಸಾಧ್ಯವಾಗದು. ಸಹೋದ್ಯೋಗಿಗಳಿಂದ ನೆರವು ಸಿಗಲಿದೆ. ಹಣಕಾಸಿನ ವಿಚಾರದಲ್ಲಿ ಪ್ರಾಮಾಣಿಕತೆಯಿರಲಿ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ ಕಂಡುಬರಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ದೊರೆಯಲಿದೆ.