ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅನಿವಾರ್ಯ ಕಾರಣಗಳಿಗೆ ಧನ ವ್ಯಯವಾಗಲಿದೆ. ಆಪ್ತರೊಂದಿಗೆ ಅನಗತ್ಯ ಸಂಘರ್ಷ ಬೇಡ. ಇಷ್ಟ ಭೋಜನ ಮಾಡುವ ಯೋಗ. ವ್ಯಾಪಾರಿಗಳಿಗೆ ಕೊಡು-ಕೊಳ್ಳುವ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ.ವೃಷಭ: ದಂಪತಿಗಳಲ್ಲಿ ಅನುರಾಗ ವೃದ್ಧಿಯಾಗಲಿದೆ. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಮುನ್ನಡೆ ಕಂಡುಬರಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.ಮಿಥುನ: ಹೊಸದಾಗಿ ಆರಂಭಿಸಿದ್ದ ಉದ್ದಿಮೆಯಲ್ಲಿ ಏಳು-ಬೀಳು ಸಾಮಾನ್ಯ. ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುವ ತಾಳ್ಮೆಯಿರಲಿ.