ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉತ್ತಮ ಧನಾರ್ಜನೆಗೆ ನಾನಾ ಅವಕಾಶಗಳು ಕಂಡುಬರಲಿದೆ. ಆಪ್ತರೊಂದಿಗೆ ಮನಸ್ಸಿನ ಮಾತುಗಳನ್ನು ಹಂಚಿಕೊಳ್ಳಲಿದ್ದೀರಿ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರಲಿದೆ. ಅನಗತ್ಯ ಚಿಂತೆ ಬೇಡ.ವೃಷಭ: ವೃತ್ತಿಧರ್ಮ ಪಾಲಿಸುವುದಕ್ಕಾಗಿ ಕೆಲವೊಂದು ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಕ್ರಿಯಾತ್ಮಕ ಯೋಜನೆಗಳನ್ನು ಜಾರಿಗೆ ತರಲಿದ್ದೀರಿ. ಕೃಷಿಕರಿಗೆ ಹೊಸ ದಾರಿಗಳು ಗೋಚರವಾದೀತು.ಮಿಥುನ: ರಾಜಕೀಯ ರಂಗದಲ್ಲಿರುವವರಿಗೆ ಬಿಡುವಿಲ್ಲದ ಕೆಲಸ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಉತ್ತಮ.