ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಾಹನ, ಭೂಮಿ ಪರಭಾರೆ ವಿಚಾರದಲ್ಲಿ ಮುನ್ನಡೆ ಕಂಡುಬರಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯವೊದಗಿಬರಲಿದೆ. ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಏರುಪೇರುಗಳಾದೀತು. ತಾಳ್ಮೆಯಿರಲಿ.ವೃಷಭ: ನೀವು ಬಾಯ್ತಪ್ಪಿ ಆಡುವ ಮಾತು ಸಂಬಂಧಗಳಲ್ಲಿ ಬಿರುಕು ಮೂಡಿಸೀತು. ಮಾತಿನ ಮೇಲೆ ನಿಗಾ ಇರಲಿ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಹಿಂದೆ ಮಾಡಿದ್ದ ಹೂಡಿಕೆಗಳು ಉತ್ತಮ ಫಲ ಕೊಡಲಿವೆ. ಸಾಂಸಾರಿಕವಾಗಿ ಸುಂದರ