ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ, ವ್ಯವಹಾರ ನಿಮಿತ್ತ ಪರವೂರಿಗೆ ಪ್ರಯಾಣ ಮಾಡುವ ಸಂಭವ. ಭೂಮ್ಯಾದಿ ಆಸ್ತಿ ವ್ಯವಹಾರಗಳಲ್ಲಿ ಮುನ್ನಡೆ. ಕ್ರಿಯಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುವುದು.ವೃಷಭ: ಗೃಹ ರಿಪೇರಿ, ವಾಹನ ರಿಪೇರಿ ಇತ್ಯಾದಿ ಕೆಲಸಗಳಿಗೆ ಖರ್ಚು ವೆಚ್ಚಗಳ ಕಂಡುಬಂದೀತು. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಸ್ವಯಂ ವೃತ್ತಿಯವರಿಗೆ ಮುನ್ನಡೆಯ ಯೋಗ.ಮಿಥುನ: ಧಾರ್ಮಿಕ ವಿಚಾರದಲ್ಲಿ ಹೆಚ್ಚಿನ ಶ್ರದ್ಧೆ ಕಂಡುಬರಲಿದೆ.