ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅನಿರೀಕ್ಷಿತ ಧನ ಸಂಪತ್ತು ನಿಮ್ಮದಾಗಲಿದೆ. ಹೊಸ ಉದ್ಯೋಗಾವಕಾಶಗಳು ಬಂದಾಗ ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.ವೃಷಭ: ಆಸ್ತಿ ವಿಚಾರಗಳಲ್ಲಿ ಹಿರಿಯರ ಮಧ್ಯಸ್ಥಿಕೆಯಿಂದ ವಿವಾದಗಳು ಬಗೆಹರಿಯಲಿವೆ. ಧನಾರ್ಜನೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ.ಮಿಥುನ: ನಿರೀಕ್ಷೆಗೂ ಮೀರಿ ಧನಾರ್ಜನೆಯಾಗಲಿದೆ. ಪಾಲುದಾರಿಕಾ ವೃತ್ತಿಯಲ್ಲಿ ನಿರೀಕ್ಷಿತ ಅಭಿವೃದ್ಧಿ ಕಂಡುಬರುವುದು.