ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಬೇರೆಯವರು ನಿಮ್ಮ ಬಗ್ಗೆ ಹೇಳುವ ಅಭಿಪ್ರಾಯಗಳಿಗೆ ಅತಿಯಾಗಿ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹ ಹೈರಾಣಾದೀತು. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕೆಲವು ತೀರ್ಮಾನ ಕೈಗೊಳ್ಳಲಿದ್ದೀರಿ.ವೃಷಭ: ಹೊಸದಾಗಿ ಆರಂಭಿಸಿದ್ದ ಉದ್ದಿಮೆಗಳು ಕೈ ಹಿಡಿಯಲಿವೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಇಷ್ಟಮಿತ್ರರೊಂದಿಗೆ ಸುಂದರ ಕ್ಷಣ ಕಳೆಯುವ ಯೋಗ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ಹಳೆಯ ಬಾಕಿ ತೀರಿಸಲು ಮುಂದಾಗಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ