ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಬಹಳ ದಿನಗಳ ನಂತರ ಆಪ್ತರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಇಷ್ಟ ಭೋಜನ ಮಾಡುವ ಯೋಗ. ಆದರೆ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಹಣಕಾಸಿನ ದುಂದು ವೆಚ್ಚಗಳಿಗೆ ಕಡಿವಾಣವಿರಲಿ.ವೃಷಭ: ಬೇರೆಯವರು ನಿಮ್ಮ ಕೆಲಸಗಳಲ್ಲಿ ಮೂಗು ತೂರಿಸಲು ಅವಕಾಶ ಮಾಡಿಕೊಡಬೇಡಿ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಉದ್ಯೋಗ, ವ್ಯವಹಾರದಲ್ಲಿ ನಿಮ್ಮ ಏಳಿಗೆಗೆ ಕುಟುಂಬದವರ ಪ್ರೋತ್ಸಾಹವಿರಲಿದೆ.