ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ, ವ್ಯವಹಾರದಲ್ಲಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ತಾಂತ್ರಿಕ ವೃತ್ತಿಯವರಿಗೆ ಕಾರ್ಯದೊತ್ತಡ ಕಂಡುಬರಲಿದೆ. ಹಣಕಾಸಿನ ವಿಚಾರವಾಗಿ ಆಪ್ತರೊಂದಿಗೆ ಸಂಘರ್ಷವಾಗುವ ಸಾಧ್ಯತೆ. ತಾಳ್ಮೆಯಿರಲಿ.ವೃಷಭ: ಕಾರ್ಯರಂಗದಲ್ಲಿ ಇನ್ನೂ ಹೆಚ್ಚಿನ ಸಾಧನೆಗೆ ಕ್ರಿಯಾತ್ಮಕವಾಗಿ ಯೋಚನೆ ಮಾಡಬೇಕಾಗುತ್ತದೆ. ಮಾತಿನ ಮೇಲೆ ನಿಗಾ ಇರಲಿ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ.ಮಿಥುನ: ಅವಿವಾಹಿತರಿಗೆ ವಿವಾಹಾದಿ ಪ್ರಯತ್ನಗಳಿಗೆ ಅಡ್ಡಿ ಆತಂಕಗಳು ಎದುರಾದೀತು. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ