ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕೆಲಸಗಳನ್ನು ಪೂರ್ತಿ ಮಾಡಿದ ತೃಪ್ತಿ ನಿಮ್ಮದಾಗಲಿದೆ. ಹೊಸ ವಿಷಯಗಳನ್ನು ಕಲಿಯುವ ಆಸಕ್ತಿ ಕಂಡುಬರಲಿದೆ. ಸಾಂಸಾರಿಕವಾಗಿ ನೆಮ್ಮದಿಯಿರಲಿದೆ.ವೃಷಭ: ಉದ್ದೇಶಿತ ಕೆಲಸಗಳಿಗೆ ಕೊನೆಯ ಗಳಿಗೆಯಲ್ಲಿ ಅಡೆತಡೆಗಳು ಬಂದೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯವೊದಗಿಬರಲಿದೆ. ಹಣಕಾಸಿನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ.ಮಿಥುನ: ವ್ಯಾವಹಾರಿಕ ಸಂಬಂಧಗಳ ಸುಧಾರಣೆಗೆ ಮುಂದಾಗಲಿದ್ದೀರಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡಬೇಕಾಗುತ್ತದೆ. ಮಹಿಳೆಯರಿಗೆ