ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮಕ್ಕಳ ಭವಿಷ್ಯದ ವಿಚಾರದಲ್ಲಿ ಸ್ಪಷ್ಟ ತೀರ್ಮಾನ ಕೈಗೊಳ್ಳಲಿದ್ದೀರಿ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ವ್ಯವಹಾರ ನಿಮಿತ್ತ ಕಿರು ಸಂಚಾರ ಮಾಡಬೇಕಾದೀತು. ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ.ವೃಷಭ: ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ಪರಿಹಾರವಾಗಲಿದೆ. ಜನರ ಮಧ್ಯೆ ಇದ್ದರೂ ಏಕಾಂಗಿತನ ಕಾಡೀತು. ಹಿರಿಯರಿಗೆ ದೇವತಾ ಕಾರ್ಯಗಳಿಂದ ನೆಮ್ಮದಿ. ಸಾಕು ಪ್ರಾಣಿಗಳೊಂದಿಗೆ ಎಚ್ಚರ.ಮಿಥುನ: ಉದ್ಯೋಗ, ವ್ಯವಹಾರದಲ್ಲಿ ನಿಮಗೆ ಎದುರಾಳಿಗಳಿಂದ ತೊಂದರೆ ಸಾಧ್ಯತೆ.