ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮಗೆ ಎದುರಾಗುವ ಸಮಸ್ಯೆಗಳಿಗೆ ಸಹೋದ್ಯೋಗಿಗಳಿಂದ ಪರಿಹಾರವಾಗಲಿದೆ. ಇಷ್ಟ ಮಿತ್ರರೊಂದಿಗೆ ಭೋಜನ ಮಾಡುವ ಯೋಗ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.ವೃಷಭ: ನಿರುದ್ಯೋಗಿಗಳಿಗೆ ಸದವಕಾಶಗಳು ಬಂದಾಗ ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಸಮಾನ ಮನಸ್ಕರೊಂದಿಗೆ ಬೆರೆಯಲಿದ್ದೀರಿ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಕೌಟುಂಬಿಕವಾಗಿ ಸುಖ, ಸಮೃದ್ಧಿ ಕಂಡುಬರಲಿದೆ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು