ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ, ವ್ಯವಹಾರದಲ್ಲಿ ನಿಮ್ಮ ಘನತೆ ಹೆಚ್ಚುವುದು. ಹೊಸ ಉದ್ಯೋಗಾವಕಾಶಗಳು ನಿಮ್ಮಲ್ಲಿ ಹೊಸ ಉತ್ಸಾಹ ತುಂಬಲಿದೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಕುಲದೇವರ ಪ್ರಾರ್ಥನೆ ಮಾಡಿ.ವೃಷಭ: ಭೂಮ್ಯಾದಿ ವ್ಯವಹಾರಗಳಿಗೆ ಅನುಕೂಲಕರ ವಾತಾವರಣವಿರಲಿದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.ಮಿಥುನ: ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಲಿದ್ದೀರಿ. ನಿಮ್ಮ ಅಧಿಕಾರಯುತ ಧೋರಣೆ ಇತರರಿಗೆ ಕಿರಿ ಕಿರಿ ಉಂಟುಮಾಡಬಹುದು. ಕಾರ್ಯನಿಮಿತ್ತ