ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮಾನಸಿಕವಾಗಿ ಕೆಲವು ಚಿಂತೆಗಳು ನಿಮ್ಮನ್ನು ಕಾಡಲಿದೆ. ಅನಗತ್ಯ ಮಾತುಗಳಿಗೆ ಕಡಿವಾಣವಿರಲಿ. ಮಕ್ಕಳಿಗಾಗಿ ಕೆಲವೊಂದು ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಹಣಕಾಸಿನ ಖರ್ಚು ವೆಚ್ಚಗಳಾಗಬಹುದು.ವೃಷಭ: ವೃತ್ತಿರಂಗದಲ್ಲಿ ಗೌರವ, ಸ್ಥಾನಮಾನಾದಿಗಳು ಲಭ್ಯವಾಗಲಿದೆ. ಸಾಂಸಾರಿಕವಾಗಿ ಸುಖ, ಸಮೃದ್ಧಿ ಕಂಡುಬರುವುದು. ದೇವತಾ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ಉದ್ಯೋಗ, ವ್ಯವಹಾರದಲ್ಲಿ ನಿಮ್ಮ ನೈಪುಣ್ಯ ಒರೆಗೆ ಹಚ್ಚಲಿದ್ದೀರಿ. ಕಷ್ಟದಲ್ಲಿರುವವರಿಗೆ ಸಹಾಯ ಮಾಡಿದ ತೃಪ್ತಿ ನಿಮಗೆ ಸಿಗಲಿದೆ.