ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕಬೇಕಾಗುತ್ತದೆ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗಲಿದ್ದೀರಿ. ಹೊಸ ಉದ್ಯೋಗ ಅವಕಾಶಗಳು ಸಿಗಲಿವೆ.ವೃಷಭ: ಹಳೆಯ ಮಿತ್ರರನ್ನು ಭೇಟಿಯಾಗುವ ಅವಕಾಶ. ಸಾಂಸಾರಿಕವಾಗಿ ಸುಖ, ಸಮೃದ್ಧಿ ಕಂಡುಬರುವುದು. ಕೆಳ ಹಂತದ ನೌಕರರಿಗೆ ಬಡ್ತಿ ಸಂಭವ. ಮಕ್ಕಳ ವಿಚಾರದಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ.ಮಿಥುನ: ಆಸ್ತಿ ವಿಚಾರದಲ್ಲಿ ಸಹೋದರಾದಿ ಸಂಬಂಧಿಗಳೊಂದಿಗೆ ಭಿನ್ನಾಭಿಪ್ರಾಯಗಳಾಗುವ ಸಾಧ್ಯತೆ. ಇಷ್ಟಮಿತ್ರರೊಂದಿಗೆ ಕಾಲ ಕಳೆಯುವ ಯೋಗ.