ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅಧಿಕ ಧನಸಂಚಯನ ಮಾಡುವ ದಿನವಿದು. ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ದೈಹಿಕವಾಗಿ ನೋವು, ಅನಾರೋಗ್ಯ ಕಾಡೀತು. ದೇವತಾ ಪ್ರಾರ್ಥನೆ ಮಾಡಿ.ವೃಷಭ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಕೂಡಿಬರಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಿಲ್ಲದಿದ್ದರೂ ನಷ್ಟವಾಗದು. ಹಿಂದೆ ಮಾಡಿದ ಸಹಾಯಕ್ಕೆ ತಕ್ಕ ಪ್ರತಿಫಲ ಪಡೆಯಲಿದ್ದೀರಿ.ಮಿಥುನ: ಸಾಂಸಾರಿಕ ವಿಚಾರದಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ದಾಂಪತ್ಯದಲ್ಲಿ