ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮಾನಸಿಕ ನೆಮ್ಮದಿಗಾಗಿ ದೇವಾಲಯ ಸಂದರ್ಶನ ಮಾಡಲಿದ್ದೀರಿ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ. ಸಂಗಾತಿಯ ಧೋರಣೆ ಅಸಮಾಧಾನಕ್ಕೆ ಕಾರಣವಾದೀತು. ತಾಳ್ಮೆ ತಂದುಕೊಳ್ಳಿ.ವೃಷಭ: ಉದ್ಯೋಗದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆದಾಯದಲ್ಲಿ ಅತೃಪ್ತಿ ಭಾವ ಕಾಡಲಿದೆ. ಹಣ ಗಳಿಕೆಗೆ ಹೊಸ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ ಹೆಚ್ಚಾಗಲಿದೆ.ಮಿಥುನ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಉತ್ತಮ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಗುರುಹಿರಿಯರ