ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದೇಹಾರೋಗ್ಯದ ಬಗ್ಗೆ ಚಿಂತೆಯಾದೀತು. ವಿದ್ಯಾರ್ಥಿಗಳಿಗೆ ಹೊಸ ವಿಚಾರಗಳನ್ನು ಕಲಿಯುವ ಆಸಕ್ತಿ ಕಂಡುಬರಲಿದೆ. ಭೂಮ್ಯಾದಿ ವ್ಯವಹಾರಗಳ ಲೆಕ್ಕ ಪತ್ರಗಳ ಬಗ್ಗೆ ನಿಗಾ ಇರಲಿ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ವ್ಯಾಪಾರಿಗಳಿಗೆ ಆದಾಯ ವೃದ್ಧಿ.ಮಿಥುನ: ಉದ್ಯೋಗ ಬದಲಾವಣೆಗಾಗಿ ಪ್ರಯತ್ನಿಸುತ್ತಿದ್ದರೆ ಯಶಸ್ಸು ಸಿಗಲಿದೆ. ಹಳೆಯ ಮಿತ್ರರನ್ನು ಭೇಟಿಯಾಗುವ ಯೋಗ.