ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

ಬೆಂಗಳೂರು, ಶುಕ್ರವಾರ, 3 ಮೇ 2019 (06:00 IST)

ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


 
ಮೇಷ: ಮಹಿಳೆಯರು ಮಾನಸಿಕವಾಗಿ ಉದ್ವೇಗದಲ್ಲಿರುತ್ತಾರೆ. ಬೇಸರ ಕಾಡಬಹುದು. ಹಿರಿಯರೊಂದಿಗೆ ಮನಸ್ತಾಪವಾಗಬಹುದು. ಶುಭ ಮಂಗಲ ಕಾರ್ಯಗಳಿಗೆ ಓಡಾಟ ನಡೆಸಬೇಕಾಗುತ್ತದೆ. ಕೌಟುಂಬಿಕ ಜವಾಬ್ಧಾರಿಗಳು ಹೆಚ್ಚುವುದು.
 
ವೃಷಭ: ಸಾಂಸಾರಿಕವಾಗಿ ನೆಮ್ಮದಿಯ ವಾತಾವರಣವಿರಲಿದೆ. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಹಲವು ಅಡ್ಡಿ ಆತಂಕಗಳು ಎದುರಾಗಬಹುದು. ವಿದ್ಯಾರ್ಥಿಗಳಿಗೆ ಸತತ ಪ್ರಯತ್ನ ಅಗತ್ಯ. ದಿನದಂತ್ಯಕ್ಕೆ ಶುಭ ಸುದ್ದಿ.
 
ಮಿಥುನ: ಆರ್ಥಿಕ ಪರಿಸ್ಥಿತಿ ಸುಧಾರಿಸುವುದು. ಉದ್ದೇಶಿತ ಯೋಜನೆಗಳಿಗೆ ಚಾಲನೆ ನೀಡುವಿರಿ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅಡೆತಡೆಗಳು ಎದುರಾಗಬಹುದು. ವ್ಯಾಪಾರಿಗಳಿಗೆ ಸ್ಪರ್ಧೆ ಎದುರಾಗಬಹುದು.
 
ಕರ್ಕಟಕ: ದೈವಾನುಕೂಲದಿಂದ ಸಕಲ ಅಭಿವೃದ್ಧಿ ಕಾಣುವಿರಿ. ಹಾಗಿದ್ದರೂ ಉದಾಸೀನ ಪ್ರವೃತ್ತಿ ತೋರಿದರೆ ಯಶಸ್ಸು ಸಿಗದು. ಸಹೋದರಿಯರ ಮದುವೆ ಪ್ರಯತ್ನ ನಡೆಸುವಿರಿ. ಕೌಟುಂಬಿಕ ಜವಾಬ್ಧಾರಿಗಳು ಹೆಚ್ಚುವುದು.
 
ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ವಿಶ್ವಾಸ ಗಳಿಸಲು ಪ್ರಯತ್ನ ನಡೆಸಬೇಕಾಗುತ್ತದೆ. ಕೌಟುಂಬಿಕವಾಗಿ ಕೆಲವೊಂದು ಅನಿರೀಕ್ಷಿತ ಖರ್ಚು ವೆಚ್ಚಗಳು ಬರಬಹುದು. ವ್ಯಾಪಾರ ವಹಿವಾಟುಗಳಿಗೆ ಕೈ ಹಾಕುವಾಗ ಎಚ್ಚರಿಕೆ ಅಗತ್ಯ.
 
ಕನ್ಯಾ: ವಾಹನ, ಗೃಹೋಪಯೋಗಿ ವಸ್ತುಗಳ ಖರೀದಿಗೆ ಹೆಚ್ಚಿನ ಧನವ್ಯಯವಾದೀತು. ಸಂಗಾತಿಯ ಇಷ್ಟ ಕಷ್ಟಗಳಿಗೆ ಕಿವಿಗೊಡಿ. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗಬಹುದು. ಉದ್ಯೋಗದಲ್ಲಿ ಬಡ್ತಿ, ವೇತನ ಹೆಚ್ಚಳ ಸಂಭವವಿದೆ.
 
ತುಲಾ: ಮನೆಯ ಹಿರಿಯರ ಆರೋಗ್ಯ ಕೈ ಕೊಟ್ಟು ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಎದುರಾಗಬಹುದು. ಹೊಸ ವಾಹನ ಖರೀದಿಯಲ್ಲಿ ನಷ್ಟ ಅನುಭವಿಸುವಿರಿ. ಮಹಿಳೆಯರಿಗೆ ಉದ್ಯೋಗದಲ್ಲಿ ಯಶಸ್ಸು.
 
ವೃಶ್ಚಿಕ: ಅನಿರೀಕ್ಷಿತವಾಗಿ ಶುಭ ವಾರ್ತೆಗಳನ್ನು ಕೇಳುವಿರಿ. ಸಂಕಷ್ಟದ ಸಮಯದಲ್ಲಿ ಮಿತ್ರರಿಂದ ಸಹಕಾರ ಸಿಗಲಿದೆ. ಉದ್ದೇಶಿತ ಕಾರ್ಯಗಳು ವಿಳಂಬವಾದರೂ ದಡ ಮುಟ್ಟುವುದು. ಮಾನಸಿಕ ಉದ್ವೇಗಗಳಿಗೆ ಒಳಗಾಗದಂತೆ ಮನಸ್ಸು ಹಿಡಿತದಲ್ಲಿಟ್ಟುಕೊಳ್ಳಿ.
 
ಧನು: ಸಹೋದರರಿಂದ ಕಿರಿ ಕಿರಿ ಉಂಟಾಗಬಹುದು. ಆಸ್ತಿ ವ್ಯವಹಾರಗಳನ್ನು ಕೆಲವು ದಿನಗಳ ಮಟ್ಟಿಗೆ ಮುಂದೂಡುವುದು ಒಳ್ಳೆಯದು. ಸಾಮಾಜಿಕವಾಗಿ ನಿಮ್ಮ ಪ್ರತಿಭೆಗೆ ತಕ್ಕ ಫಲ ದೊರೆಯಲಿದೆ. ಹಿರಿಯರ ಬಗ್ಗೆ ಕಾಳಜಿ ವಹಿಸಿ.
 
ಮಕರ: ನಿರುದ್ಯೋಗಿಗಳು ಕೊಂಚ ನಿರಾಶೆ ಅನುಭವಿಸುವರು. ಪ್ರೇಮಿಗಳಿಗೆ ಶುಭ ದಿನ. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯ. ಆದರೆ ಕೌಟುಂಬಿಕವಾಗಿ ನೀವು ಕೈಗೊಳ್ಳುವ ನಿರ್ಧಾರಗಳು ಹಿರಿಯರ ಬೇಸರಕ್ಕೆ ಕಾರಣವಾಗಬಹುದು.
 
ಕುಂಭ: ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ಹೆಚ್ಚುವುದು. ಲೆಕ್ಕ ಪತ್ರಗಳನ್ನು ಸರಿಯಾಗಿಟ್ಟುಕೊಳ್ಳದಿದ್ದರೆ ಮುಂದೆ ಅಪಾಯ ತಪ್ಪದು. ಕನಸು ನನಸು ಮಾಡಿಕೊಳ್ಳಲು ಸತತ ಪ್ರಯತ್ನ ಅಗತ್ಯ.
 
ಮೀನ: ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ ಕಾಣುವಿರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರುವುದು. ಆದರೆ ಜೀರ್ಣಕ್ರಿಯೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆ ಕಂಡುಬರಬಹುದು. ಆದಾಯಕ್ಕೆ ಕೊರತೆಯಿರದು.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ದೀಪದ ಬತ್ತಿಯಿಂದ ಯಾವ ರಾಶಿಯವರಿಗೆ ಯಾವ ದೋಷ ನಿವಾರಣೆಯಾಗುತ್ತದೆ?

ಬೆಂಗಳೂರು: ದೀಪ ಎನ್ನುವುದು ಜೀವನದಲ್ಲಿ ಕತ್ತಲೆಯನ್ನು ನಾಶ ಮಾಡಿ ಬೆಳಕು ಒದಗಿಸುವುದು. ದೇವರಿಗೆ ದೀಪ ...

news

ಶ್ರೀ ಗಕಾರ ಗಣಪತಿ ಸ್ತೋತ್ರ ಯಾವ ವಾರ ಓದಿದರೆ ಏನು ಫಲ?

ಬೆಂಗಳೂರು: ಶ್ರೀ ಗಕಾರ ಗಣಪತಿ ಅಷ್ಟೋತ್ತರ ಓದಿ ಪೂಜಿಸುವವರಿಗೆ ಬಹಳ ಬೇಗ ಫಲ ಸಿಗುವುದು. ಯಾವ ವಾರ ಓದಿದರೆ ...

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

news

ದೀಪದ ಬತ್ತಿಯಿಂದ ಯಾವ ರಾಶಿಯವರಿಗೆ ಯಾವ ದೋಷ ನಿವಾರಣೆಯಾಗುತ್ತದೆ?

ಬೆಂಗಳೂರು: ದೀಪ ಎನ್ನುವುದು ಜೀವನದಲ್ಲಿ ಕತ್ತಲೆಯನ್ನು ನಾಶ ಮಾಡಿ ಬೆಳಕು ಒದಗಿಸುವುದು. ದೇವರಿಗೆ ದೀಪ ...