ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

ಬೆಂಗಳೂರು, ಮಂಗಳವಾರ, 2 ಜುಲೈ 2019 (08:53 IST)

ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


 
ಮೇಷ: ಅನ್ಯರ ಏಳಿಗೆ ಕಂಡು ಸಂತೋಷಪಡುವ ಮನಸ್ಥಿತಿ ಬೆಳೆಸಿಕೊಳ್ಳಿ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೀಳರಿಮೆಯಿಂದಾಗಿ ಕಷ್ಟಕ್ಕೆ ಸಿಲುಕುವಿರಿ. ವಾತ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬರುವುದು.
 
ವೃಷಭ: ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರಲಿದೆ. ಮಕ್ಕಳಿಂದ ಮನಸ್ಸಿಗೆ ನೋವಾಗುವ ಘಟನೆಗಳು ನಡೆಯಲಿವೆ. ತಾಳ್ಮೆಯಿಂದಿರುವುದು ಮುಖ್ಯ. ಆರ್ಥಿಕವಾಗಿ ಪರಿಸ್ಥಿತಿ ಸುಧಾರಣೆಯಾಗಲಿದೆ.
 
ಮಿಥುನ: ನಿರುದ್ಯೋಗಿಗಳು ಸ್ವಂತ ಉದ್ಯೋಗ ಮಾಡುವುದರ ಕುರಿತು ಚಿಂತನೆ ನಡೆಸಲಿದ್ದಾರೆ. ಗೃಹೋಪಯೋಗಿ ವಸ್ತುಗಳಿಗಾಗಿ ಧನವಿಯೋಗ ಮಾಡುವಿರಿ. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ.
 
ಕರ್ಕಟಕ: ದಾಂಪತ್ಯ ಜೀವನದಲ್ಲಿ ಹೊಂದಾಣಿಕೆಯಿಂದ ನಡೆದುಕೊಳ್ಳುವುದು ಮುಖ್ಯ ಎಂಬುದನ್ನು ಮನಗಾಣಿರಿ. ಸಾಮಾಜಿಕವಾಗಿ ಉತ್ತಮ ಸ್ಥಾನ ಮಾನ ಗಳಿಸುವಿರಿ. ಆದಾಯವಿದ್ದಷ್ಟೇ ಖರ್ಚೂ ಮಾಡುವಿರಿ.
 
ಸಿಂಹ: ಕೌಟುಂಬಿಕವಾಗಿ ನಿಮ್ಮ ಜವಾಬ್ಧಾರಿಗಳು ಹೆಚ್ಚಲಿವೆ. ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ನೂತನ ದಂಪತಿಗೆ ಮಧುಚಂದ್ರ ಭಾಗ್ಯವಿದೆ.
 
ಕನ್ಯಾ: ದೇವತಾ ದರ್ಶನ ಮಾಡುವಿರಿ. ಆಸ್ತಿ ವಿಚಾರದಲ್ಲಿ ದಾಯಾದಿಗಳೊಂದಿಗಿನ ಕಲಹವನ್ನು ಹಿರಿಯರ ಮಧ್ಯಸ್ಥಿಕೆಯಲ್ಲಿ ಬಗೆಹರಿಸಿಕೊಳ್ಳುವುದು ಒಳ್ಳೆಯದು. ಆಕಸ್ಮಿಕವಾಗಿ ಧನ ಲಾಭವಾಗಲಿದೆ.
 
ತುಲಾ: ಇಷ್ಟ ಮಿತ್ರರೊಂದಿಗೆ ಪ್ರವಾಸ, ಭೋಜನ ಸಾಧ್ಯತೆಯಿದೆ. ವಾಹನ ಸವಾರರು ಎಚ್ಚರಿಕೆಯಿಂದಿರಬೇಕು. ಹೊಸ ವ್ಯವಹಾರಗಳಿಗೆ ಕೈ ಹಾಕುವಾಗ ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸಿ.
 
ವೃಶ್ಚಿಕ: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಆಲಸ್ಯತನ ಕಂಡುಬಂದೀತು. ಅಂದುಕೊಂಡ ಕಾರ್ಯಗಳಿಗೆ ಅನಿರೀಕ್ಷಿತ ವಿಘ್ನಗಳು ಎದುರಾಗಲಿವೆ. ಕುಲದೇವರ ಪ್ರಾರ್ಥನೆ ಮಾಡಿ ಮುಂದುವರಿಯಿರಿ. ದಿನದಂತ್ಯದಲ್ಲಿ ಶುಭ ಸುದ್ದಿ.
 
ಧನು: ಗೃಹ ಕೃತ್ಯಗಳಲ್ಲಿ ಸಂಗಾತಿಗೆ ಸಹಕಾರ ನೀಡಬೇಕಾಗುತ್ತದೆ. ದುಡುಕು ನಿರ್ಧಾರ ಕೈಗೊಳ್ಳಬೇಡಿ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ನಡೆಸಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡುವಿರಿ.
 
ಮಕರ: ಆತ್ಮೀಯರ ಕಷ್ಟ ಕಾರ್ಪಣ್ಯಗಳಿಗೆ ಕಿವಿಗೊಡುವಿರಿ. ಅನವಶ್ಯಕ ವಿವಾದಗಳಿಂದ ದೂರವಿದ್ದರೇ ಒಳ್ಳೆಯದು. ಅನಿರೀಕ್ಷಿತವಾಗಿ ಮನೆಗೆ ನೆಂಟರ ಆಗಮನವಾಗಲಿದೆ. ಖರ್ಚಿನ ಬಗ್ಗೆ ಹಿಡಿತವಿರಲಿ.
 
ಕುಂಭ: ಅಪರಿಚಿತರನ್ನು ಹೊಸ ವ್ಯವಹಾರಕ್ಕೆ ಕೈ ಹಾಕಬೇಡಿ. ಮನೆಯಲ್ಲಿ ಕಳ್ಳತನದ ಭೀತಿಯಿದ್ದು, ಎಚ್ಚರಿಕೆ ಅಗತ್ಯ. ಪ್ರೇಮಿಗಳಿಗೆ ಮನೆಯವರಿಂದ ವಿರೋಧ ವ್ಯಕ್ತವಾಗಬಹುದು. ನಿಮ್ಮ ಹಿತ ಮಿತವಾದ ಮಾತಿನಿಂದಲೇ ಹಿರಿಯರ ಮನ ಗೆಲ್ಲಬೇಕು.
 
ಮೀನ: ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗುವುದು. ಆದರೆ ಕಷ್ಟದ ಸಮಯದಲ್ಲಿ ಸಂಗಾತಿಯ ಸಮಯೋಚಿತ ಸಲಹೆ ಉಪಯೋಗಕ್ಕೆ ಬರುವುದು. ಆರ್ಥಿಕವಾಗಿ ಧನಾರ್ಜನೆಗೆ ನಾನಾ ಮಾರ್ಗಗಳನ್ನು ಗೋಚರವಾಗಲಿದೆ. ಉಪಯೋಗಿಸುವ ಜಾಣತನ ಬೇಕು ಅಷ್ಟೇ.ಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ಆರ್ದ್ರಾ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ...

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

news

ಮೃಗಶಿರಾ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ...

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.