ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

ಬೆಂಗಳೂರು, ಗುರುವಾರ, 11 ಜುಲೈ 2019 (08:29 IST)

ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


 
ಮೇಷ: ಕುಟುಂಬದವರ ಜತೆಗೆ, ಆಪ್ತರ ಜತೆಗೆ ಸಂತೋಷದ ಕ್ಷಣಗಳನ್ನು ಕಳೆಯುವಿರಿ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡುವುರಿ. ಆದರೆ ಖರ್ಚು ವೆಚ್ಚಗಳ ಬಗ್ಗೆ ಕಡಿವಾಣವಿರಲಿ. ಆರೋಗ್ಯದ ಬಗ್ಗೆ ಚಿಂತೆಯಾಗುವುದು.
 
ವೃಷಭ: ಹಿರಿಯರ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ನಿಮ್ಮ ಜೀವನದ ದಿಕ್ಕು ಬದಲಾಯಿಸುವ ಘಟನೆ ಸಂಭವಿಸುವ ಸಾಧ್ಯತೆಯಿದೆ. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸುವಿರಿ.
 
ಮಿಥುನ: ದೈವಾನುಕೂಲದಿಂದ ಇಂದು ನೀವು ಅಂದುಕೊಂಡ ಕಾರ್ಯಗಳು ಸುಗಮವಾಗಿ ನೆರವೇರಲಿದೆ. ಆರ್ಥಿಕವಾಗಿ ಚೇತರಿಕೆ ಕಂಡುಬರುವುದು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ.
 
ಕರ್ಕಟಕ: ಉದ್ಯೋಗದಲ್ಲಿ ಸ್ಥಾನ ಪಲ್ಲಟವಾಗುವ ನಿರೀಕ್ಷೆಯಿದೆ. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಉನ್ನತ ಸ್ಥಾನ ಮಾನ ಲಭ್ಯವಾಗುವುದು. ಕೌಟುಂಬಿಕವಾಗಿ ಸಂಗಾತಿಯೊಂದಿಗೆ ಸುಮಧುರ ಕ್ಷಣಗಳನ್ನು ಕಳೆಯುವಿರಿ.
 
ಸಿಂಹ: ಇಷ್ಟ ಮಿತ್ರರ ಭೇಟಿ, ಭೋಜನ ಸಾಧ್ಯತೆಯಿದೆ. ಆದರೆ ಮಾತಿನ ಮೇಲೆ ನಿಗಾ ಇರಲಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗುವಿರಿ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡುವಿರಿ.
 
ಕನ್ಯಾ: ಸಾಲಗಳು ಪಾವತಿಯಾಗುವುದು. ಆರ್ಥಿಕವಾಗಿ ಹಂತ ಹಂತವಾಗಿ ಚೇತರಿಕೆ ಕಂಡುಬರುವುದು. ಆದರೆ ಆರೋಗ್ಯದಲ್ಲಿ ಸಣ್ಣ ಪುಟ್ಟ ಏರುಪೇರು ಕಂಡುಬರಬಹುದು. ಸಹೋದರರಿಂದ ಮನಸ್ಸಿಗೆ ಕಿರಿ ಕಿರಿಯಾಗಬಹುದು.
 
ತುಲಾ: ಉದ್ಯೋಗ ಮತ್ತು ಕುಟುಂಬ ಸದಸ್ಯರ ನಡುವೆ ಸಮತೋಲನ ಕಾಯ್ದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಲಿದೆ. ತಾಳ್ಮೆಯಿಂದ ಕಷ್ಟದ ಪರಿಸ್ಥಿತಿಯನ್ನು ನಿಭಾಯಿಸಬೇಕು. ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಸಿಗುವುದು.
 
ವೃಶ್ಚಿಕ: ನಿರುದ್ಯೋಗಿಗಳು ಉದ್ಯೋಗ ನಿಮಿತ್ತ ವಿದೇಶ ಪ್ರಯಾಣ ಮಾಡಬೇಕಾಗಬಹುದು. ಆರ್ಥಿಕವಾಗಿ ಧನಾರ್ಜನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ. ಸಂಗಾತಿಯೊಂದಿಗೆ ಸುಮಧುರ ಕ್ಷಣ ನಿಮ್ಮದಾಗುವುದು.
 
ಧನು: ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗುವುದು. ಸಂಗಾತಿಯೊಂದಿಗೆ ದುಡುಕಿನ ಮಾತನಾಡಿದರೆ ವಾಗ್ವಾದ ತಪ್ಪಿದ್ದಲ್ಲ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗುವುದು. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯ.
 
ಮಕರ: ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಕೊಂಚ ಹಿನ್ನಡೆಯಾಗಬಹುದು. ಆದರೆ ನಿರಾಶೆ ಬೇಡ. ಹಣಕಾಸಿನ ಮುಗ್ಗಟ್ಟುಗಳು ಎದುರಾಗಿ ಕೈ ಹಿಡಿದ ಕಾರ್ಯಗಳು ವಿಳಂಬವಾಗಬಹುದು. ತಾಳ್ಮೆಯಿಂದಿರಿ.
 
ಕುಂಭ: ಅನಗತ್ಯ ಚಿಂತೆಗಳು ಮನಸ್ಸಿಗೆ ಬಾಧೆ ನೀಡುವುದು. ಉದ್ಯೋಗ ಕ್ಷೇತ್ರದಲ್ಲಿ ಮಹಿಳೆಯರಿಂದ ಸಹಾಯ ಸಿಗುವುದು. ವ್ಯಾಪಾರ ವ್ಯವಹಾರ ಮಾಡುವವರಿಗೆ ನಿವ್ವಳ ಲಾಭ ಸಿಗಲಿದೆ. ಆದರೆ ಹಿತಶತ್ರುಗಳ ಬಗ್ಗೆ ಎಚ್ಚರಿಕೆ ಅಗತ್ಯ.
 
ಮೀನ: ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯುವಿರಿ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗುವುದು. ನೂತನ ದಂಪತಿಗಳಲ್ಲಿ ವಿರಸ ಕಂಡುಬರಬಹುದು. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯಿರಲಿದೆ.ಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ಸ್ವಾತಿ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ...

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

news

ಚಿತ್ತ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ...

news

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.