ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

ಬೆಂಗಳೂರು, ಮಂಗಳವಾರ, 16 ಜುಲೈ 2019 (09:05 IST)

ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


 
ಮೇಷ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ವರ್ತನೆಯಿಂದ ಅಸಹನೆಯಾಗುವುದು. ಮಹಿಳೆಯರಿಂದ ವಂಚನೆಗೊಳಗಾಗುವ ಭೀತಿಯಿದೆ. ಋಣಾತ್ಮಕ ಚಿಂತನೆಗಳಿಗೆ ಅವಕಾಶಕೊಡಬೇಡಿ. ಆರೋಗ್ಯದಲ್ಲಿ ಸುಧಾರಣೆಯಾಗುವುದು.
 
ವೃಷಭ: ಸಾಂಸಾರಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಓಡಾಟ ನಡೆಸುವಿರಿ. ಆರ್ಥಿಕವಾಗಿ ಧನಾಗಮನವಾದಷ್ಟೇ ಖರ್ಚೂ ಇರಲಿದೆ.
 
ಮಿಥುನ: ವ್ಯಾಪಾರ ವಹಿವಾಟಿನಲ್ಲಿ ನಷ್ಟ ಅನುಭವಿಸಬೇಕಾದೀತು. ಸಾಂಸಾರಿಕವಾಗಿ ಖರ್ಚು ವೆಚ್ಚಗಳು ಅಧಿಕವಾಗಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.
 
ಕರ್ಕಟಕ: ವಿದ್ಯಾರ್ಥಿಗಳು ಉತ್ತಮ ಕೆಲಸದಿಂದ ಶಿಕ್ಷಕರ ಪ್ರಶಂಸೆ ಪಡೆಯುವರು. ಸಾಧು ಸಂತರ ಭೇಟಿಯಾಗುವ ಸಾಧ್ಯತೆಯಿದೆ. ಸ್ವ ಉದ್ಯೋಗಿಗಳು ಆರ್ಥಿಕವಾಗಿ ಲಾಭ ಗಳಿಸುವರು. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.
 
ಸಿಂಹ: ಗೃಹೋಪಯೋಗಿ ವಸ್ತುಗಳಿಗೆ ಧನ ವ್ಯಯವಾದೀತು. ವಿವಾಹ ಬೇಡವೆಂದಿದ್ದವರಿಗೆ ಅನಿರೀಕ್ಷಿತ ರೂಪದಲ್ಲಿ ವಿವಾಹ ಕೂಡಿಬರಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಹೊಸ ಮಿತ್ರರು ಸಿಗಲಿದ್ದಾರೆ.
 
ಕನ್ಯಾ: ಸಂಗಾತಿಯ ಮನೋಕಾಮನೆಗಳನ್ನು ಪೂರೈಸಲು ಧನ ವ್ಯಯವಾಗುವುದು. ವಿದ್ಯಾರ್ಥಿಗಳಿಗೆ ಪ್ರಯತ್ನಕ್ಕೆ ತಕ್ಕ ಫಲ ಸಿಗುವುದು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವುದು. ವ್ಯಾಪಾರದಲ್ಲಿ ಲಾಭವಾಗಲಿದೆ.
 
ತುಲಾ: ದಾಯಾದಿಗಳೊಂದಿಗಿನ ಆಸ್ತಿ ಕಲಹಗಳು ದೂರವಾಗುವುದು. ವೃತ್ತಿರಂಗದಲ್ಲಿ ನಿಮಗೆ ಅನುಕೂಲಕರವಾದ ವಾತಾವರಣವಿರಲಿದೆ. ಆರ್ಥಿಕವಾಗಿ ಧನಾಗಮನವಾದಷ್ಟೇ ಖರ್ಚೂ ಇರಲಿದೆ. ಎಚ್ಚರಿಕೆ ಅಗತ್ಯ.
 
ವೃಶ್ಚಿಕ: ನಿಮ್ಮ ಮನೋಬಲವನ್ನು ದೃಢವಾಗಿರಿಸುವ ಸಮಯವಿದು. ಚಿತ್ತ ಚಾಂಚಲ್ಯಕ್ಕೆ ಅವಕಾಶ ಕೊಡಬೇಡಿ. ಉದ್ಯೋಗ ಬದಲಾವಣೆಗೆ ಚಿಂತನೆ ಮಾಡುವಿರಿ. ವೈಯಕ್ತಿಕವಾಗಿಯೂ ಆರೋಗ್ಯ ಸಮಸ್ಯೆ ಕಾಡಬಹುದು. ತಾಳ್ಮೆಯಿಂದಿರಿ.
 
ಧನು: ಸಾಂಸಾರಿಕವಾಗಿ ತಾಳ್ಮೆಯಿಂದಿದ್ದಷ್ಟೂ ಉತ್ತಮ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಸಿಗಲಿದೆ. ಆರ್ಥಿಕವಾಗಿ ನಿಮಗೆ ಅನುಕೂಲಕರ ವಾತಾವರಣವಿಲ್ಲದೇ ಇದ್ದರೂ ನಷ್ಟವಾಗದು. ದೇವತಾ ಪ್ರಾರ್ಥನೆ ಮಾಡಿ.
 
ಮಕರ: ಎಷ್ಟೋ ದಿನಗಳಿಂದ ಬಾಕಿಯಿದ್ದ ಕಾರ್ಯಗಳು ನೆರವೇರಲಿದೆ. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಮುನ್ನಡೆ ಸಿಗುವುದು. ನೂತನ ದಂಪತಿಗೆ ಮಧುಚಂದ್ರ ಭಾಗ್ಯ. ಖರ್ಚುವೆಚ್ಚದ ಬಗ್ಗೆ ಮಿತಿಯಿರಲಿ.
 
ಕುಂಭ: ಭೂತಕಾಲದ ಬಗ್ಗೆ ಯೋಚಿಸುತ್ತಾ ಬೇಸರದಿಂದರಬೇಡಿ. ಸಮಾಧಾನ ಚಿತ್ತದಿಂದ ಕಾರ್ಯಪ್ರವೃತ್ತರಾಗಿ. ಸಾಂಸಾರಿಕವಾಗಿ ಸಂಗಾತಿಯ ಸಹಕಾರ ಸಿಗಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗುವುದು.
 
ಮೀನ: ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಯಶಸ್ಸು ಸಿಗಲಿದೆ. ದಂಪತಿಗಳಿಗೆ ಸಂತಾನ ಫಲ ಸೂಚನೆಗಳು ಸಿಗಲಿವೆ. ಕೌಟುಂಬಿಕವಾಗಿ ಸುಂದರ ಕ್ಷಣ ನಿಮ್ಮದಾಗುವುದು. ಆರ್ಥಿಕವಾಗಿ ಖರ್ಚಿನ ಬಗ್ಗೆ ಹಿಡಿತವಿರಲಿ.ಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ಇಂದು ಚಂದ್ರಗ್ರಹಣ: ಯಾವೆಲ್ಲಾ ರಾಶಿ, ನಕ್ಷತ್ರದವರಿಗೆ ದೋಷವಿದೆ?

ಬೆಂಗಳೂರು: ಇಂದು ಮಧ್ಯರಾತ್ರಿ ಉತ್ತರಾಷಾಢ ನಕ್ಷತ್ರದಲ್ಲಿ ಚಂದ್ರನಿಗೆ ಕೇತುಗ್ರಹಣ ಸಂಭವಿಸಲಿದೆ. ಇದರ ದೋಷ ...

news

ಪೂರ್ವಾಷಾಢ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ...

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

news

ಮೂಲ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ...