ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಮೇಷ: ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸುವಿರಿ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆದರೆ ಕಾರ್ಯಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡದಿಂದ ದೇಹ ಹೈರಾಣಾಗುವುದು. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸುವಿರಿ. ತಾಳ್ಮೆ ಅಗತ್ಯ.ವೃಷಭ: ಎಷ್ಟೋ ದಿನದಿಂದ ಬಾಕಿಯಿದ್ದ ಕೆಲಸಗಳಿಗೆ ಚಾಲನೆ ನೀಡುವಿರಿ. ಆರ್ಥಿಕವಾಗಿ ಅಧಿಕ ಧನವ್ಯಯವಾಗಲಿದೆ. ಇಷ್ಟಮಿತ್ರರ ಭೇಟಿ ಸಾಧ್ಯತೆಯಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಮನಸ್ಸು ಮಾಡುವರು.