ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಮೇಷ: ಸಂಗಾತಿಯ ಮನೋಕಾಮನೆ ಪೂರೈಸಲು ಹೆಚ್ಚಿನ ಧನವ್ಯಯಮಾಡಬೇಕಾಗುತ್ತದೆ. ಹಿರಿಯರ ಮಾತಿಗೆ ಕಿವಿಗೊಡಿ. ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕಾರ್ಯದೊತ್ತಡದಿಂದ ದೇಹ ಹೈರಾಣಾಗುವುದು. ಮನೆ ಬದಲಾವಣೆಗೆ ಚಿಂತನೆ ಮಾಡುವಿರಿ.ವೃಷಭ: ಆರ್ಥಿಕವಾಗಿ ಇದುವರೆಗೆ ಇದ್ದ ಹಣಕಾಸಿನ ಕಷ್ಟಗಳು ನಿವಾರಣೆಯಾಗಿ ನಿಧಾನವಾಗಿ ಅಭಿವೃದ್ಧಿ ಗೋಚರಕ್ಕೆ ಬರುವುದು. ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಿರಿ. ಸಂಗಾತಿಯ ದೇಹಾರೋಗ್ಯದಲ್ಲಿ ಏರುಪೇರಾಗಬಹುದು ಎಚ್ಚರಿಕೆ ಅಗತ್ಯ.ಮಿಥುನ: ಸಾಮಾಜಿಕವಾಗಿ ನಿಮ್ಮ ಕೆಲಸಗಳಿಗೆ ಉತ್ತಮ