ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಮೇಷ: ಆರೋಗ್ಯ ಸಮಸ್ಯೆ ನಿಮ್ಮ ಚಿಂತೆ ಹೆಚ್ಚಿಸುವುದು. ಸಂಗಾತಿಯ ಸಹಕಾರ ಸಿಗಲಿದೆ. ಆದರೆ ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ಮನೆಗೆ ಹೊಸ ವಸ್ತುಗಳ ಖರೀದಿ ಮಾಡುವಿರಿ. ವಾಹನ ಸಂಚಾರ ಮಾಡುವಾಗ ಎಚ್ಚರಿಕೆಯಿಂದಿರಿ.ವೃಷಭ: ಸರಕಾರಿ ಕೆಲಸಗಳಲ್ಲಿ ಜಯ, ಮುನ್ನಡೆ ಗಳಿಸುವಿರಿ. ಹಿರಿಯರ ತೀರ್ಥ ಯಾತ್ರೆಗೆ ತಯಾರಿ ನಡೆಸುವಿರಿ. ಮನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆಯಿಂದಿರಿ. ಇಷ್ಟಮಿತ್ರರ ಭೇಟಿ ಮನಸ್ಸಿಗೆ ಮುದ ನೀಡುವುದು.