ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಮೇಷ: ಹಲವು ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಉದ್ಯೋಗ ಕ್ಷೇತ್ರದಲ್ಲಿ ಬರುವ ಅಡೆತಡೆಗಳು ನಿವಾರಣೆಯಾಗಲಿವೆ. ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗವನ್ನು ಕಂಡುಕೊಳ್ಳಲಿದ್ದಾರೆ. ಆಕಸ್ಮಿಕ ಧನಲಾಭವಾಗಲಿದೆ.ವೃಷಭ: ಹೊಸ ವ್ಯವಹಾರಗಳಿಗೆ ಕೈ ಹಾಕಲು ಇದು ಸಕಾಲ. ದೈವಾನುಕೂಲದಿಂದ ಅಂದುಕೊಂಡ ಕೆಲಸಗಳನ್ನು ನೆರವೇರಿಸುವಿರಿ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ. ನೀರಿಗಾಗಿ ಪರದಾಟ ತಪ್ಪದು. ದಿನದಂತ್ಯಕ್ಕೆ ಶುಭ ಸುದ್ದಿ.ಮಿಥುನ: ಆರ್ಥಿಕವಾಗಿ ಹೆಚ್ಚಿನ ಅಭಿವೃದ್ಧಿ