ಮಾಘಮಾಸ ಶುಕ್ಲ ಪಕ್ಷದ ಸಪ್ತಮಿ ತಿಥಿಯಂದು ಸೂರ್ಯನ ಜನ್ಮದಿನ.ಅಲ್ಲದೆ ಸಪ್ತಮಿ ತಿಥಿಯ ಅದಿದೇವತೆಯು ಸೂರ್ಯನೇ ಆಗಿರುವುದರಿಂದ, ಫೆಬ್ರವರಿ 17 ದಂದು ಸೂರ್ಯ ಆರಾಧನೆಯ ರಥ ಸಪ್ತಮಿ ದಿನವೆಂದು ಆಚರಿಸಲಾಗುತ್ತದೆ. ನಿಯಮಬದ್ಧವಾದ ಉದಯ ಹಾಗೂ ಅಸ್ತಗಳ ಮೂಲಕ ನಮಗೆ ಶಿಸ್ತು ಬದ್ಧವಾದ ಕರ್ತವ್ಯ ಪ್ರಜ್ಞೆಯನ್ನು, ಚೈತನ್ಯವನ್ನು ತುಂಬುವ ಸೂರ್ಯನ ಪೂಜೆಯೇ ಈ ದಿವಸದ ಮುಖ್ಯ ಆಚರಣೆಯಾಗಿದೆ. ಈ ದಿನದಲ್ಲಿ ನಡೆಯುವ ಕೆಲಸ ಕಾರ್ಯಗಳು, ಕೋರಿಕೆಗಳು ಫಲಪ್ರದವಾಗಿರುತ್ತವೆ. ಸೂರ್ಯನ ಪ್ರಕಾಶ ಹೆಚ್ಚುತ್ತಿರುವುದರಿಂದ ಚಳಿಗಾಲದ