ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರುವುದಕ್ಕೆ ಕ್ಷಣಗಣನೆ ಶುರುವಾಗಿದ್ದು, ಹಲವೆಡೆ ನಿಷೇಧಾಜ್ಞೆ ಜಾರಿಮಾಡಲಾಗಿದೆ. ಬೀದರ್ ಜಿಲ್ಲೆಯಲ್ಲಿ ನಿಷೇಧಾಜ್ಞೆ ಹೊರಡಿಸಿ ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದಾರೆ.ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆಗಸ್ಟ್ 4ರ ಮಧ್ಯರಾತ್ರಿಯಿಂದ ಆಗಸ್ಟ್ 5ರ ಮಧ್ಯೆ ರಾತ್ರಿವರೆಗೆ ನಿಷೇಧಾಜ್ಞೆ ಹೊರಡಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ರಾಮಚಂದ್ರನ್ ಆರ್. ಆದೇಶ ಹೊರಡಿಸಿದ್ದಾರೆ.5ಕ್ಕಿಂತ ಹೆಚ್ಚು ಜನರು