ಅಯೋಧ್ಯೆ(ಆ.05): ಶತಮಾನಗಳಿಂದ ಆಯೋಧ್ಯೆ ರಾಮ ಮಂದಿರದಲ್ಲಿ ಪೂಜೆ ಸಲ್ಲಿಸಲು ಕಾಯುತ್ತಿರುವ ಭಕ್ತರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಮ ಮಂದಿರ ಕಾಮಗಾರಿ ಭರದಿಂದ ಸಾಗುತ್ತಿದ್ದು, 2023ರ ಡಿಸೆಂಬರ್ ತಿಂಗಳಲ್ಲಿ ರಾಮ ಮಂದಿರ ಸಾರ್ವಜನಿಕರಿಗೆ ಮುಕ್ತವಾಗಲಿದೆ ಎಂದು ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸ್ಪಷ್ಟಪಡಿಸಿದೆ. ರಾಮ ಮಂದಿರ, ಕಾಂಪ್ಲೆಕ್ಸ್, ಮ್ಯೂಸಿಯಂ ಸೇರಿದಂತೆ ಎಲ್ಲಾ ಕಾಮಗಾರಿಗಳು 2025ಕ್ಕೆ ಪೂರ್ಣಗೊಳ್ಳಲಿದೆ. 2023ರಿಂದ ಸಾರ್ವಜನಿಕರಿಗೆ ಪ್ರವೇಶಕ್ಕೆ ಅನುಮತಿ ನೀಡಲಾಗುವುದು ಎಂದು ಟ್ರಸ್ಟ್ ಹೇಳಿದೆ. 2020ರ ಆಗಸ್ಟ್