ಚಂದನಕ್ಕೆ ಅಥವಾ ಶ್ರೀಗಂಧಕ್ಕೆ ಪ್ರಮುಖ ಸ್ಥಾನವಿದ್ದು ನೂರಾರು ವರ್ಷಗಳಿಂದ ಪ್ರಮುಖ ಸೌಂದರ್ಯ ಪ್ರಸಾಧನದ ರೂಪದಲ್ಲಿ ಬಳಸಲಾಗುತ್ತಾ ಇದೆ. ಸುಂದರ, ನೈಸರ್ಗಿಕ, ಕಾಂತಿಯುಕ್ತ ವದನ ಪಡೆಯಬೇಕಾದರೆ ಕೆಳಗಿರುವ ಯಾವುದಾದರೂ ಒಂದು ವಿಧಾನ ಅನುಸರಿಸಿದರೆ ಸಾಕು. ಚಂದನ ಮತ್ತು ಹಾಲು ಗಂಧದ ಕೊರಡನ್ನು ಕೊಂಚ ಹಾಲಿನೊಂದಿಗೆ ತೇದು ದಪ್ಪನೆಯ ಲೇಪ ತಯಾರಿಸಿ. ಕೊರಡು ಇಲ್ಲದಿದ್ದರೆ ಚಂದನದ ಪುಡಿಯನ್ನೂ ಬಳಸಬಹುದು. ಚೆನ್ನಾಗಿ ಒಣಗಿದ ಬಳಿಕ ಕೇವಲ ತಣ್ಣೀರಿನಿಂದ ತೊಳೆದುಕೊಂಡು ದಪ್ಪ ಟವೆಲ್ಲಿನಿಂದ ಒತ್ತಿ ಒರೆಸಿಕೊಳ್ಳಿ.