ಐಶ್ವರ್ಯಾ ರೈ! ಈ ಹೆಸರೇ ಹಾಗೆ. ಸೌಂದರ್ಯಕ್ಕೆ ಮತ್ತೊಂದು ಹೆಸರು ಎಂಬುದು ಜಗಜ್ಜಾಹೀರು. ವಯಸ್ಸು 35 ದಾಟಿದರೂ ಇಂದಿಗೂ ತನ್ನ ರೂಪ ಪ್ರತಿಭೆಯಿಂದಾಗಿ ಮುಂಚೂಣಿಯಲ್ಲಿರುವ ನಟಿ. ಬದುಕನ್ನು ತಾನು ಬಯಸಿದ ಹಾಗೆ ಕಟ್ಟಿಕೊಂಡ ಜಾಣೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕೀರ್ತಿಯನ್ನು ಪ್ರಚುರ ಪಡಿಸಿದ ಬೆಡಗಿ. ಐಶ್ ಮಾದಕವಾಗಿಯೂ ಕಾಣಬಲ್ಲ ಚತುರೆ. ಅಪ್ಪಟ ಭಾರತೀಯ ನಾರಿಯಾಗಿಯೂ ಕಂಗೊಳಿಸಬಲ್ಲ ದಕ್ಷಿಣ ಕನ್ನಡದ ಚೆಲುವೆ. ಈ ತುಳುನಾಡ ಬೆಡಗಿ ತನ್ನ ಜೀವನದ ಒಂದೊಂದೇ ಮೆಟ್ಟಿಲನ್ನೂ