ಎಳನೀರು ದೇಹಕ್ಕೆ ಅಗತ್ಯವಾದ ಬಹಳಷ್ಟು ಪೋಷಕಾಂಶಗಳನ್ನು ಒದಗಿಸುತ್ತದೆ. ಈ ಪೋಷಕಾಂಶಗಳನ್ನು ಪಡೆದ ದೇಹ ಶೀಘ್ರ ತನ್ನ ಚಟುವಟಿಕೆಗಳನ್ನು ಪೂರ್ಣ ಕ್ಷಮತೆಯಲ್ಲಿ ನಿರ್ವಹಿಸಲು ಸಬಲಗೊಳ್ಳುತ್ತದೆ. ಎಳನೀರಿನ ಉಪಯೋಗ ಕೇವಲ ಕುಡಿಯುವುದಕ್ಕಲ್ಲ, ಸರಿಯಾಗಿ ಬಳಸಿದರೆ ದೇಹದ ಹೊರಭಾಗಗಳಾದ ಚರ್ಮ ಮತ್ತು ಕೂದಲ ಆರೈಕೆಗೂ ಒಳ್ಳೆಯದು.ಜೀರ್ಣಕ್ರಿಯೆ ಎಳನೀರಿನಲ್ಲಿ ಫೋಲಿಕ್ ಆ್ಯಸಿಡ್, ಫಾಸ್ಪೇಟೇಸ್, ಕ್ಯಾಟಲೇಸ್, ಡಿಹೈಡ್ರೋಜೀನೇಸ್, ಡೈಯಾಸ್ಟೇಸ್, ಪೆರಾಕ್ಸಿಡೇಸ್, ಆರ್.ಎನ್.ಎ ಪಾಲಿಮರೇಸಸ್ ಮೊದಲಾದ ಕಿಣ್ವಗಳು ಇದೆ. ಇವುಗಳು ವಿವಿಧ ರೀತಿಯ ಆಹಾರಗಳು ಸುಲಭವಾಗಿ ಜೀರ್ಣವಾಗಲು