ತಾನು ಸುಂದರವಾಗಿ ಕಾಣಬೇಕೆಂದು ಯಾರು ತಾನೆ ಬಯಸುವುದಿಲ್ಲ? ಈ ಸಲಹೆಗಳನ್ನು ಪಾಲಿಸಿದಲ್ಲಿ ನಿಮ್ಮ ಸೌಂದರ್ಯ ವರ್ಧನೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಒಮ್ಮೆ ಪ್ರಯತ್ನಿಸಿ ನೋಡಿ. 1. ಪ್ರತಿದಿನ ಸ್ವಲ್ಪ ತುಳಸಿ ರಸವನ್ನು ಜೇನುತುಪ್ಪದೊಡನೆ ಸೇವಿಸುತ್ತಿದ್ದರೆ ಮುಖದ ತೇಜಸ್ಸು ಹೆಚ್ಚುತ್ತದೆ ಅಲ್ಲದೆ ಮುಖದ ಮೇಲಿನ ಕಲೆಗಳೂ ಕೂಡ ಮಾಯವಾಗುತ್ತದೆ. 2.ಕಹಿ ಬೇವಿನ ಏಳೆಂಟು ಎಲೆಗಳನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿ ತುಸು ಉಗುರು ಬೆಚ್ಚಗಿರುವಾಗಲೇ ಮುಖ ತೊಳೆದುಕೊಳ್ಳುತ್ತಿದ್ದರೆ ಸೌಂದರ್ಯ ವೃದ್ಧಿಸುತ್ತದೆ, ಅಲ್ಲದೆ ಸಿಡಿಬಿನ ಕಲೆಗಳು