PTI ಬಾಲಿವುಡ್ನ ಅತಿ ವೈರಿಗಳೆಂದು ಕರೆಯಲ್ಪಡುತ್ತಿದ್ದ ಸಲ್ಮಾನ್ ಖಾನ್ ಹಾಗೂ ಶಾರೂಖ್ ಖಾನ್ ಒಬ್ಬರನ್ನೊಬ್ಬರು ಅಪ್ಪಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಪವಿತ್ರ ರಂಜಾನ್ ಮಾಸಾಚರಣೆಯ ಸಮಯದಲ್ಲಿ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಈ ಘಟನೆ ನಡೆದಿದೆ. ಕಾಂಗ್ರೆಸ್ ಶಾಸಕ ಬಾಬಾ ಸಿದ್ದಿಕಿ ಮುಂಬೈನ ತಾಜ್ ಲ್ಯಾಂಡ್ಸ್ ಎಂಡ್ ಹೋಟೆಲ್ನಲ್ಲಿ ಆಯೋಜಿಸಿದ್ದ ಔತಣ ಕೂಟದಲ್ಲಿ ಅವರಿಬ್ಬರೂ ಹಸ್ತಲಾಘವ ಮಾಡಿಕೊಂಡು ಒಬ್ಬರನ್ನೊಬ್ಬರು ಅಪ್ಪಿಕೊಂಡು ನೆರೆದವರನ್ನು ಚಕಿತಗೊಳಿಸಿದ್ದಾರೆ. ಎರಡು ದಿನಗಳಿಂದ ರಾಷ್ಟ್ರೀಯ ವಾಹಿನಿಗಳಲ್ಲೂ ಸೇರಿದಂತೆ ಎಲ್ಲೆಡೆ ಪ್ರಚಾರವಾಗಿದೆ.