PR ಬಾಲಿವುಡ್ನಲ್ಲಿ ಟ್ರಾಜಿಡಿ ಕಿಂಗ್ ಎಂದೇ ಕರೆಯಲ್ಪಡುವ ನಟ ದಿಲೀಪ್ ಕುಮಾರ್ ಅವರನ್ನು ಭಾನುವಾರ ಸಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಘು ಹೃದಯಾಘಾತಕ್ಕೊಳಗಾದ ಕಾರಣ ಚಿಕಿತ್ಸೆಗಾಗಿ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಬೈನ ಬಾಂದ್ರಾ ಪಶ್ಚಿಮ ಪ್ರದೇಶದಲ್ಲಿರುವ ಲೀಲಾವತಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಅವರನ್ನು ತುರ್ತು ನಿಗಾ ಘಟಕದಲ್ಲಿ ಇಡಲಾಗಿದೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವಕ್ತಾರ ಡಾ.ನರೇಶ್ ತ್ರಿವೇದಿ ತಿಳಿಸಿದ್ದಾರೆ. ಭಾನುವಾರ ರಾತ್ರಿ