PR ಸದಾ ಒಂದಲ್ಲಾ ಒಂದು ವಿಷಯದಲ್ಲಿ ಸುದ್ದಿಯಲ್ಲಿರುವ ಬಾಲಿವುಡ್ ನಟ ಸಂಜಯ್ ದತ್ಗೆ ಉತ್ತರ ಪ್ರದೇಶದ ಮೌ ಜಿಲ್ಲಾ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ. ನಟ ಸಂಜಯ್ ದತ್ 2009ರ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದರು. ಈ ಸಂಬಂಧ ನ್ಯಾಯಾಲಯದ ಮುಂದೆ ಹಾಜರಾಗಿ ವಿವರಣೆ ಸಲ್ಲಿಸಲು ನೀಡಲಾಗಿದ್ದ ಸಮನ್ಸ್ನ್ನು, ಗೈರುಹಾಜರಿ ಕಾರಣ ನೀಡಿ ಹಿಂತಿರುಗಿಸಿದ್ದ ಸಂಜಯ್