ಮುಂಬೈ : ತೆಲುಗು ನಟಿ ಶ್ರೀರೆಡ್ಡಿ ಕಾಸ್ಟಿಂಗ್ ಕೌಚ್ ವಿರೋಧಿಸಿ ಪ್ರತಿಭಟನೆ ಮಾಡಿದ ಮೇಲೆ ಸಿನಿಮಾ ಜೀವನದಲ್ಲಿ ತಾವು ಎದುರಿಸಿದ ಲೈಂಗಿಕ ದೌರ್ಜನ್ಯದ ಬಗ್ಗೆ ನಟಿಯರು ಒಬ್ಬೊಬ್ಬರಾಗಿಯೇ ತಮ್ಮ ಅನುಭವವನ್ನು ಹೊರಹಾಕುತ್ತಿದ್ದಾರೆ. ಇದೀಗ ಸಂಜಯ್ ಲೀಲಾ ಬನ್ಸಾಲಿ ಪದ್ಮಾವತ್ ಚಿತ್ರದಲ್ಲಿ ಮೆಹರುನ್ನಿಸಾ ಪಾತ್ರದಲ್ಲಿ ನಟಿಸಿರುವ ನಟಿ ಅದಿತಿ ರಾವ್ ಸಿನಿಮಾ ಜೀವನದಲ್ಲಿ ತಮಗಾದ ಕೆಟ್ಟ ಅನುಭವವನ್ನು ಹೇಳಿದ್ದಾರೆ.