ಚೆನ್ನೈ: ಬಾಲಿವುಡ್ ಬೆಡಗಿ ವಿದ್ಯಾ ಬಾಲನ್ ನಟಿಸಿದ ತುಮ್ಹಾರಿ ಸುಲು ಚಿತ್ರ ಕಳೆದ ವರ್ಷ ಬಿಡುಗಡೆಯಾಗಿ ಸಾಕಷ್ಟು ಮೆಚ್ಚುಗೆ ಗಳಿಸಿತ್ತು. ಈಗ ಈ ಚಿತ್ರವನ್ನು ತಮಿಳಿಗೆ ರಿಮೇಕ್ ಮಾಡಲು ನಿರ್ದೇಶಕ ರಾಧಾಮೋಹನ್ ಸಜ್ಜಾಗಿದ್ದಾರೆ. ಅಂದಹಾಗೇ, ವಿದ್ಯಾಬಾಲನ್ ನಟಿಸಿದ್ದ ಪಾತ್ರದಲ್ಲಿ ಜ್ಯೋತಿಕಾ ಕಾಣಿಸಿಕೊಳ್ಳುತ್ತಿದ್ದಾರೆ. ಮೇ ತಿಂಗಳಿನಲ್ಲಿ ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದೆಯಂತೆ. ಈಗಾಗಲೇ ರಾಧಾ ಮೋಹನ್ ಈ ಚಿತ್ರದ ಸ್ಕ್ರಿಪ್ಟ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ನಾನು ವಿದ್ಯಾಬಾಲನ್ ಅವರ ದೊಡ್ಡ ಫ್ಯಾನ್ ಆಗಿದ್ದು,